One Tap News - Kannada News Daily

Header
collapse
...
Home / Kodagu / ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು - ಬಹಳ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ನೃತ್ಯ ಶಿಕ್ಷಕಿ

ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು - ಬಹಳ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ನೃತ್ಯ ಶಿಕ್ಷಕಿ

2025-10-20  Kodagu Desk  10 views
ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು -  ಬಹಳ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ನೃತ್ಯ ಶಿಕ್ಷಕಿ

 

ಸುಳ್ಯ : 

ವಿರಳ ಹಾಗೂ ತೀರ ಅಪರೂಪದ ಕಾಯಿಲೆ Hyper IGE Mediated Mast cell activation syndromeನಿಂದ (ಹೈಪರ್-IgE ಸಿಂಡ್ರೋಮ್‌) ಬಳಲುತ್ತಿದ್ದ ಗಾಂಧಿನಗರ ನಿವಾಸಿ ಚಾಂದಿನಿ ಜೀವನ್ಮರಣ ಹೋರಾಟ ಕೊನೆಗೂ ಫಲಿಸಿಲ್ಲ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಾಂದಿನಿ ಆರೋಗ್ಯ ತೀರಾ ಹದಗೆಟ್ಟಿತ್ತು. ಒಂದಲ್ಲ ಒಂದು ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿಗೆ ತನಗಿರುವ ಈ ಅಪರೂಪದ ಕಾಯಿಲೆ ಬಗ್ಗೆ ಗೊತ್ತೇ ಇರಲಿಲ್ಲ. ಹೀಗಾಗಿ ಸುಳ್ಯ, ಮಂಗಳೂರು ಸೇರಿದಂತೆ ಹಲವೆಡೆ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಚಾಂದಿನಿ ಅವರು ಬಳಲುತ್ತಿದ್ದ Hyper IGE Mediated Mast cell activation syndromeಗೆ ಜಿಲ್ಲಾಮಟ್ಟದಲ್ಲಿ ಚಿಕಿತ್ಸಾ ಸೌಲಭ್ಯ ಇಲ್ಲ ಎಂದು ಆರೋಗ್ಯ ಇಲಾಖೆ ಹೇಳಿದ್ದ ಕಾರಣ, ಹೈದರಾಬಾದ್‌ನ AIG ಆಸ್ಪತ್ರೆಗೆ ಚಾಂದಿನಿ ಅವರನ್ನು ದಾಖಲಿಸಲಾಗಿತ್ತು. ಕಾಯಿಲೆಯನ್ನೂ ಅದೇ ಆಸ್ಪತ್ರೆ ಪತ್ತೆ ಮಾಡಿದ್ದು, ಆ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಚಾಂದಿನಿ ನೀಡಿದ್ದರು. ಆದರೆ ಚಿಕಿತ್ಸೆಗೆ ಸರ್ಕಾರ ಸಕಾಲದಲ್ಲಿ ಹಣ ಬಿಡುಗಡೆ ಮಾಡದ ಕಾರಣ ನಿಗದಿತ ಆಸ್ಪತ್ರೆಗಳಲ್ಲಿ ಚಾಂದಿನಿ ಅವರಿಗೆ ಸರಿಯಾಗಿ ಚಿಕಿತ್ಸೆ ಸಿಗಲಿಲ್ಲ ಎನ್ನಲಾಗಿದೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ನಿನ್ನೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಸಾವನ್ನಪ್ಪಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.

ಹೈಪರ್-IgE ಸಿಂಡ್ರೋಮ್‌ನಿಂದ ಬಳಲುತ್ತಿರುವವರಲ್ಲಿ ಚರ್ಮದ ಸಮಸ್ಯೆ ಸೇರಿ ಜೀರ್ಣಾಂಗ, ಉಸಿರಾಟದ ತೊಂದರೆ ಮತ್ತು ನರ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಚರ್ಮ ಕೆಂಪಾಗುವುದು, ಉಬ್ಬಸ, ಮಲಬದ್ಧತೆ, ಹೊಟ್ಟೆ ನೋವು, ಬ್ರೇನ್​ ಫಾಗ್​, ಹಲ್ಲಿನ ಸಮಸ್ಯೆಗಳು ಸೇರಿ ಹತ್ತು ಹಲವು ಲಕ್ಷಣಗಳು ಕಂಡುಬರುತ್ತವೆ.


Share: