One Tap News - Kannada News Daily

Header
collapse
...
Home / Kodagu / ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಶಾಸಕರ ನೇತೃತ್ವದಲ್ಲಿ ಸಭೆ.

ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಶಾಸಕರ ನೇತೃತ್ವದಲ್ಲಿ ಸಭೆ.

2025-12-04  Kodagu Desk  49 views
ವಿರಾಜಪೇಟೆ ಪುರಸಭೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಶಾಸಕರ ನೇತೃತ್ವದಲ್ಲಿ ಸಭೆ.

ವಿರಾಜಪೇಟೆ. 

ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳ ಅಭಿವೃದ್ಧಿ ಬಗ್ಗೆ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.    

ಈಗಾಗಲೇ ಮಾನ್ಯ ಶಾಸಕರು ಮಳೆ ಕಡಿಮೆಯಾದೊಡನೆ ರಸ್ತೆ ಅಭಿವೃದ್ಧಿ ಕಡೆಗೆ ವಿಶೇಷ ಗಮನಹರಿಸುತ್ತಿದ್ದು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಹಾಗೂ ರಸ್ತೆ ನಿರ್ಮಾಣದ ಬಗ್ಗೆ ವಿಶೇಷ ಸಭೆಯನ್ನು ಇಂದು ಕರೆದಿದ್ದರು. 

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಶ್ರೀ ನಿತಿನ್ ಚಕ್ಕಿ, ತಹಸೀಲ್ದಾರ್ ಪ್ರವೀಣ್, ಪುರಸಭೆ ಮುಖ್ಯ ಅಧಿಕಾರಿ ನಾಚಪ್ಪ, ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಮತೀನ್, ರಾಫಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:  ರವಿ. 


Share: