One Tap News - Kannada News Daily

Header
collapse
...
Home / Kodagu / ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ಹುದಿಕೇರಿ ಗ್ರಾಮ ಪಂಚಾಯಿತಿ

ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ಹುದಿಕೇರಿ ಗ್ರಾಮ ಪಂಚಾಯಿತಿ

2026-07-04  Kodagu Desk  8 views
ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ಹುದಿಕೇರಿ ಗ್ರಾಮ ಪಂಚಾಯಿತಿ

 

 ಜಮ್ಮು-ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಅಧಿಕಾರಿ. 

 ಪೊನ್ನಂಪೇಟೆ ತಾಲೂಕು ಹುದಿಕೇರಿ ಗ್ರಾಮ ಪಂಚಾಯತಿಯು  online ಆಧಾರಿತ ಸೇವೆಗಳನ್ನು ನೀಡಿದ ಸಂಬಂಧ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಜಮ್ಮು ಕಾಶ್ಮೀರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಾರ್ಯಗಾರದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜುರವರು   ಪ್ರಶಸ್ತಿಯನ್ನು ANSSIRDಯಲ್ಲಿ  ಇಂದು ಸ್ವೀಕರಿಸಿದ್ದಾರೆ. 

ಕಳೆದ ಕೆಲವು ತಿಂಗಳುಗಳ ಹಿಂದೆ ಇದೇ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಕೂಡ ದೊರಕಿತ್ತು.

 ಅಭಿವೃದ್ಧಿ ಅಧಿಕಾರಿ ಪುಟ್ಟುರಾಜುರವರು ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದಾಗ ಕೂಡ ಪೊನ್ನಂಪೇಟೆ ಗ್ರಾಮ ಪಂಚಾಯಿತಿಗೆ ಹಲವು ಪ್ರಶಸ್ತಿಗಳು ದೊರಕಿದ್ದವು. ಸಿಬ್ಬಂದಿಗಳ ಹಾಗೂ ಹಿರಿಯ ಅಧಿಕಾರಿಗಳ, ಮತ್ತು ಆಡಳಿತ ಮಂಡಳಿಯ ಸಹಕಾರದಿಂದ ಈ ಪ್ರಶಸ್ತಿ ಲಭ್ಯವಾಗಿದೆ ಎಂದು  ಪುಟ್ಟರಾಜು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.


Share: