One Tap News - Kannada News Daily

Header
collapse
...
Home / State News / ಅ.27 ರಂದು ಮೈಸೂರಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ.

ಅ.27 ರಂದು ಮೈಸೂರಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ.

2025-10-25  Bangalore  37 views

 ಮಡಿಕೇರಿ:

ಜಿಲ್ಲಾಡಳಿತ, ಮೈಸೂರು ಮತ್ತು ಕೊಡಗು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ಮೈಸೂರು ಮತ್ತು ಕೊಡಗು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥಾಪನೆಗೊಂಡು 50 ವರ್ಷಗಳಾದ ಹಿನ್ನೆಲೆಯಲ್ಲಿ ಅಕ್ಟೋಬರ್, 27 ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. 

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ.ನರೇಂದ್ರಸ್ವಾಮಿ, ಎರಡು ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮದ ಅಧ್ಯಕ್ಷರು, ಇತರರು ಪಾಲ್ಗೊಳ್ಳಲಿದ್ದಾರೆ.


Share: