One Tap News - Kannada News Daily

Header
collapse
...
Home / Kodagu / ಸರ್ವದೈವತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.

ಸರ್ವದೈವತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.

2025-11-12  Kodagu Desk  68 views
ಸರ್ವದೈವತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.

ಗೋಣಿಕೊಪ್ಪಲು. 

ಪದವಿಪೂರ್ವ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಇವರ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ತ್ರೋಬಾಲ್ ನಲ್ಲಿ ಪ್ರಥಮ,

 ಬಾಲಕಿಯರ ವಾಲಿಬಾಲ್ ನಲ್ಲಿ ಪ್ರಥಮ

 ಮತ್ತು ಚೆಸ್ ನಲ್ಲಿ ಆರೋಮಲ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 ಟೇಬಲ್ ಟೆನಿಸ್ ನಲ್ಲಿ ನೀಲೇಶ್ ರಾಜ್ಯಮಟ್ಟವನ್ನು ಪ್ರತಿನಿಧಿಸಲಿದ್ದಾರೆ.

 ಇವರಿಗೆ ಪ್ರಮೋದ್ ಗೌಡ ಇವರು ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ.


Share: