One Tap News - Kannada News Daily

Header
collapse
...
Home / Mysore / ಟ್ಯಾಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ.

ಟ್ಯಾಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ.

2025-10-14  Mysore Desk  94 views
ಟ್ಯಾಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ.

 

ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಟ್ಯಾಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಶ್ಲಾಘನೀಯ ಸಾಧನೆ ಮಾಡಿದ್ದಾರೆ. ಹೇಮ ಎಲ್ ಅವರು 400 ಮೀಟರ್ ಹರ್ಡಲ್‌ನಲ್ಲಿ ಪ್ರಥಮ ಸ್ಥಾನ ಮತ್ತು 100 ಮೀಟರ್ ಹರ್ಡಲ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.

ಶರತ್ ಕುಮಾರ್. ಜಿ ಅವರು ಡಿಸ್ಕಸ್ ತ್ರೋದಲ್ಲಿ ಪ್ರಥಮ ಬಹುಮಾನ ಹಾಗೂ ಜಾವೆಲಿನ್ ಥ್ರೋದಲ್ಲಿ ದ್ವಿತೀಯ ಬಹುಮಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಇದೇ ರೀತಿಯಲ್ಲಿ ರಾಹುಲ್ ತ್ರೋಬಾಲ್‌ನಲ್ಲಿ, ಯಶ್ವಿನ್ ಮತ್ತು ಯುವರಾಜ್ ವಾಲಿಬಾಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ನವೀನ್ ರೈ ಮತ್ತು ಕೃಷ್ಣಮೂರ್ತಿ, ನಿರ್ದೇಶಕರಾದ ಡಾ. ಶ್ರೀನಾಥ್ ಹಾಗೂ ಮಂಜುನಾಥ್ ಆರ್.ಎನ್ ಅವರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ ಮುಂದಿನ ಹಂತದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಮಂಜುನಾಥ್ ಎಂ.ಟಿ, ಗುಲ್ನಾಜ್ ಖಾನಮ್, ಶಶಿಕಲಾ, ಜಗದೀಶ್, ವಿಜಯ್ ಎಚ್.ಆರ್. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧಾಕರ್ ಕೆ.ಎಚ್. ಮಹದೇವ್ ಮತ್ತು ಪ್ರಸನ್ನ ಉಪಸ್ಥಿತರಿದ್ದರು.


Share: